ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಕಾರು ಡಿಕ್ಕಿ: ಯುವತಿ ಸಾವು, ಐವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತೀ ವೇಗದಲ್ಲಿ ಬಂದ ಇನ್ನೋವಾ ಕಾರು ಪಲ್ಟಿಯಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮೃತ ಮಹಿಳೆಯನ್ನು ಕೀರ್ತಿ (25) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ಮಿಥುನ್ ಹಾಗೂ ಪ್ರಯಾಣಿಕರಾದ ಚೇತನ್, ವಿನೇಶ್, ಐಶ್ವರ್ಯ, ಕೀರ್ತನಾ ಅವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಕುಂದಾಪುರದ ಎನ್.ಆರ್.ಆಚಾರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರು ಮತ್ತು ಗಾಯಗೊಂಡವರೆಲ್ಲರೂ ರಾಜರಾಜೇಶ್ವರಿ ನಗರದ ಕಂಪನಿಯೊಂದರ ಉದ್ಯೋಗಿಗಳಾಗಿದ್ದು, ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಇನ್ನೋವಾ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!