ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪುರ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕೆರೆಗೆ ಉರುಳಿಬಿದ್ದು ದಂಪತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಆದರ್ಶ್ ಯುವರಾಜ್ ಪಾಂಡವ (27) ಹಾಗೂ ಪತ್ನಿ ಶುವಾನಿ (20) ಮೃತ ದಂಪತಿ. ಕಾರಿನಲ್ಲಿದ್ದ ಮಕ್ಕಳು ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರಗೆ ದಾಖಲಿಸಲಾಗಿದೆ.
ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ ಎನ್ನಲಾಗಿದೆ. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.