ಬಸ್ ನಿಲ್ಲಿಸಿ ನಮಾಜ್ ಮಾಡಿದ ಡ್ರೈವರ್: ಸೂಕ್ತ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಂಚಾರ ನಡುವೆ ಬಸ್ ನಿಲ್ಲಿಸಿ ಸಾರಿಗೆ ಬಸ್ ಡ್ರೈವರ್ ನಮಾಜ್ ಮಾಡಿದ್ದು, ಇದೀಗ ಈ ಸಂಬಂಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಈ ಸಂಬಂಧ ಹುಬ್ಬಳ್ಳಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು, ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.

ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ‌ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ‌ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು‌ ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂಬುದಾಗಿ ತಿಳಿಸಿದ್ದಾರೆ.

ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ‌ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ‌ ಕ್ರಮ ಜರುಗಿಸಲು ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!