ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ದಿನದಂದು ಅಮೆರಿಕದನ್ಯೂ ಓರ್ಲಿಯನ್ಸ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ ಪರಿಣಾಮ 10 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಕೆನಾಲ್ ಮತ್ತು ಬೌರ್ಬನ್ ರಸ್ತೆಯಲ್ಲಿ ಜನರು ಹೊಸ ವರ್ಷವನ್ನು ಸಂಭ್ರಮಿಸುತ್ತಿದ್ದಾಗ ಜನಸಮೂಹದೊಳಕ್ಕೆ ಟ್ರಕ್ ಅನ್ನು ನುಗ್ಗಿಸಲಾಗಿದೆ. ಕೂಡಲೇ ಪೊಲೀಸರು ಚಾಲಕನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, ಗಾಯಗೊಂಡ 30 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜರ್ಮನಿಯಲ್ಲಿ ಇದೇ ರೀತಿಯ ಕಾರ್-ರಮ್ಮಿಂಗ್ ದಾಳಿಯಲ್ಲಿ ಐದು ಜನರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.