ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯದ ವೇಳೆಯಲ್ಲೇ ಮಾರ್ಗಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತು ಮಾಡಲಾಗಿದೆ.
ಹಾನಗಲ್ ಘಟಕದ ಚಾಲಕ ಎ.ಆರ್.ಮುಲ್ಲಾ ಕಾರ್ಯನಿರತ ವೇಳೆ ರಸ್ತೆ ಪಕ್ಕ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ತವ್ಯಲೋಪ ಆರೋಪದಲ್ಲಿ ಚಾಲಕ ಎ.ಆರ್. ಮುಲ್ಲಾನನ್ನು ಅಮಾನತುಗೊಳಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಇಂದು ಆದೇಶ ಹೊರಡಿಸಿದ್ದಾರೆ. ವಿಚಾರಣೆ ಮುಗಿಯುವವರೆಗೂ ಅಮಾನತು ಮಾಡಿ ಆದೇಶಿಸಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.