KSRTC ಎಲೆಕ್ಟ್ರಿಕ್‌ ಬಸ್‌ ಸೇವೆಗೆ ಚಾಲನೆ: ಒಮ್ಮೆ ಚಾರ್ಜ್‌ ಮಾಡಿದ್ರೆ ಓಡುತ್ತೆ 300 ಕಿ.ಮೀ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆಎಸ್‌ಆರ್‌ಟಿಸಿಯಿಂದ ಅಂತಾ ನಗರ ಎಲೆಕ್ಟ್ರಿಕ್‌ ಬಸ್‌(Electric Bus) ಸೇವೆಗೆ ಶಾಂತಿನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

ಭಾರತ ಸರ್ಕಾರದ ಮೇಕ್ ಇನ್ ಇಂಡಿಯಾವಿದ್ಯುತ್ ಬಸ್ ಫೇಮ್-2 ಯೋಜನೆ ಅಡಿಯಲ್ಲಿ ಹವಾ ನಿಯಂತ್ರಿತ ವಿದ್ಯುತ್‍ ಚಾಲಿತ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗೊಳಿಸಲಿದೆ.ನಿಗಮವು ತನ್ನ ವಿದ್ಯುತ್ ವಾಹನಗಳಿಗೆ ‘ಇವಿ ಪವರ್ ಪ್ಲಸ್’ ಎಂದು ಹೆಸರಿಸಲಾಗಿದ್ದು ‘ಅತ್ಯುತ್ತಮ ಅನುಭವ’ ಎಂದು ಟ್ಯಾಗ್‍ಲೈನ್‌ ನೀಡಲಾಗಿದೆ.

ಈ ಪ್ರಾಯೋಗಿಕ ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಮಾರ್ಗಗಳಲ್ಲಿ ಕಾರ್ಯಚರಣೆಗೊಳಿಸಲು ಯೋಜಿಸಲಾಗಿದೆ.

ಎಂಇಐಎಲ್‌ ಹಾಗೂ ಕೆಎಸ್‌ಆರ್‌ಟಿಸಿ ಜಂಟಿಯಾಗಿ ರಸ್ತೆಗಿಳಿಸುತ್ತಿರುವ ಪರಿಸರ ಸ್ನೇಹಿ ಬಸ್‌ ಎರಡೂವರೆ ತಾಸು ಚಾರ್ಜ್‌ ಮಾಡಿದರೆ 300 ಕಿ.ಮೀ ಕ್ರಮಿಸುವಷ್ಟು ಸಾಮರ್ಥ್ಯ ಹೊಂದಿದೆ. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿದೆ.

ಅಷ್ಟೇ ಅಲ್ಲದೆ ಬಸ್ ಸಂಚಾರದ ವೇಳೆ ಅರ್ಧದಷ್ಟು ಬ್ಯಾಟರಿ ರಿಚಾರ್ಜ್‌ ಆಗುವ ರಿ ಜನರೇಷನ್‌ ಆಗುವ ಸಿಸ್ಟಮ್‌ ಇದಾಗಿದೆ. ಬಸ್‌ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್‌ ಚಾರ್ಜಿಂಗ್‌ ಸ್ಪಾಟ್‌, ಮನರಂಜನೆಗಾಗಿ 2 ಟಿವಿ ಅಳವಡಿಸಲಾಗಿದೆ.ಬಸ್‌ 43 + 2 ಸೀಟಿಂಗ್‌ ಕೆಪಾಸಿಟಿ ಹೊಂದಿದೆ. ಬಸ್‌ ಸಂಪೂರ್ಣ ಸೆನ್ಸರ್‌ ಇರಲಿದೆ. ಮುಂದುಗಡೆ ಮತ್ತು ಹಿಂದುಗಡೆ ಕ್ಯಾಮೆರಾ ವ್ಯವಸ್ಥೆ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!