ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ಡ್ರೋನ್ ದಾಳಿ: 100ಕ್ಕೂ ಹೆಚ್ಚು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಿರಿಯಾದ ಮಿಲಿಟರಿ ಅಕಾಡೆಮಿ ಮೇಲೆ ನಡೆದ ಡ್ರೋನ್ ದಾಳಿಯಲ್ಲಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ದಾಳಿಗೂ ಮುನ್ನ ಈ ಸ್ಥಳದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಮುಗಿಸಿ ಸಿರಿಯಾದ ರಕ್ಷಣಾ ಸಚಿವರು ನಿರ್ಗಮಿಸಿದ ಬಳಿಕ ಡ್ರೋನ್‌ಗಳಿಂದ ಬಾಂಬ್‌ಗಳ ಮಳೆ ಸುರಿಯಲಾರಂಭಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 125 ಜನರು ಗಾಯಗೊಂಡಿದ್ದಾರೆ ಎಂದು ಮಾನವ ಹಕ್ಕುಗಳ ಸಿರಿಯನ್ ವೀಕ್ಷಣಾಲಯ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸಿರಿಯನ್ ಸೇನೆಯ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದ್ದು, ಸಿರಿಯಾದ ಮೂರನೇ ಅತಿದೊಡ್ಡ ನಗರವಾದ ಹೋಮ್ಸ್‌ನ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಲ್-ಅಟಾಸಿ ತಿಳಿಸಿದ್ದಾರೆ.

ಈ ದಾಳಿಯ ಹೊಣೆಯನ್ನು ಈವರೆಗೆ ಯಾವುದೇ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿಲ್ಲ.
ಶುಕ್ರವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ ಎಂದು ಸಿರಿಯಾದ ಸರ್ಕಾರಿ ಟೆಲಿವಿಷನ್ ಹೇಳಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!