ಹೊಸದಿಗಂತ ಡಿಜಿಟಲ್ ಡೆಸ್ಕ್ :
Biggboss ಖ್ಯಾತಿಯ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು (ಡಿಸೆಂಬರ್ 12) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್ನನ್ನು ಬಂಧಿಸಿದ್ದಾರೆ.
ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ಸಂಬಂಧ ತುಮಕೂರು ಜಿಲ್ಲೆಯ ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಮಿಡಿಗೇಶಿ ಪೊಲೀಸರು ಪ್ರತಾಪ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.