Saturday, September 20, 2025

ಮೈಸೂರು ದಸರಾಗೆ ಡ್ರೋನ್‌ ಭದ್ರತೆ, 30000 ಸಿಸಿ ಟಿವಿ ಕ್ಯಾಮರಾ ಕಣ್ಗಾವಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡ್ರೋನ್‌ ಕ್ಯಾಮೆರಾ ಮೂಲಕ ಈ ಬಾರಿಯ ದಸರಾ ಮಹೋತ್ಸವದ ಮೇಲೆ ಹದ್ದಿನ ಕಣ್ಣಿಡಲು ಮೈಸೂರು ನಗರ ಪೊಲೀಸರು ನಿರ್ಧರಿಸಿದ್ದು, ಎರಡು ಹಂತದಲ್ಲಿ ಭದ್ರತಾ ಕಾರ್ಯ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ದಸರಾ ಭದ್ರತೆಗಾಗಿ 6,384 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪೊಲೀಸ್‌ ಸಿಬ್ಬಂದಿಯೊಂದಿಗೆ ಹೆಚ್ಚುವರಿಯಾಗಿ ಖಾಸಗಿ ಸೇರಿದಂತೆ 30,814 ಸಿಸಿ ಟಿವಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗುತ್ತಿದೆ. ಜನ ಸಂಚಾರ ಹೆಚ್ಚಾಗಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಕಣ್ಗಾವಲಿನೊಂದಿಗೆ ಡ್ರೋನ್‌ ಕ್ಯಾಮೆರಾಗಳನ್ನು ಬಳಸಲಾಗುತ್ತಿದ್ದು, ದಸರಾ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಚಾಮುಂಡಿಬೆಟ್ಟದಲ್ಲಿ ನಡೆಯುವ ದಸರಾ ಕಾರ್ಯಕ್ರಮ, ಅರಮನೆಯ ಸಾಂಸ್ಕೃತಿಕ ಕಾರ್ಯಕ್ರಮ, ದಸರಾ ವಸ್ತು ಪ್ರದರ್ಶನ, ಕುಸ್ತಿ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ, ದೀಪಾಲಂಕಾರ, ಯುವ ದಸರಾ, ಏರ್‌ ಶೋ, ಜಂಬೂ ಸವಾರಿ ಮೆರವಣಿಗೆ, ಪಂಜಿನ ಕವಾಯತು ಕಾರ್ಯಕ್ರಮದೊಂದಿಗೆ ನಗರದೆಲ್ಲೆಡೆ ಬಂದೋಬಸ್ತ್‌ ಕೈಗೊಳ್ಳಲು ಪೊಲೀಸರನ್ನು ನಿಯೋಜಿಸಲಾಗುತ್ತಿದೆ,” ಎಂದು ಹೇಳಿದರು.

ಇದನ್ನೂ ಓದಿ