ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ಪ್ರಾಂತ್ಯದ ಖೈಬರ್ ಪಖ್ತುಂಖ್ವಾದಲ್ಲಿ ಪಾಕಿಸ್ತಾನಿ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನಿ ತಾಲಿಬಾನ್ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು 3 ಡ್ರೋನ್ ದಾಳಿ ನಡೆಸಲಾಗಿದೆ. ಇದರಿಂದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ ಎಂದು ಪಾಕಿಸ್ತಾನದ ಪೊಲೀಸರು ತಿಳಿಸಿದ್ದಾರೆ.
ಉತ್ತರ ಪಾಕಿಸ್ತಾನದಲ್ಲಿ ಇಂದು ಪಾಕ್ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಒಂದು ದಿನ ಮೊದಲು 7 ಸೈನಿಕರನ್ನು ಕೊಂದ ತಾಲಿಬಾನ್ ವಿರುದ್ಧ ಪಾಕಿಸ್ತಾನ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತಿಭಟನೆಯ ರೂಪದಲ್ಲಿ ಸ್ಥಳೀಯ ನಿವಾಸಿಗಳು ಬಲಿಪಶುಗಳ ಶವಗಳನ್ನು ರಸ್ತೆಯಲ್ಲಿ ಇಟ್ಟರು. ದಾಳಿಯಲ್ಲಿ ಕೊಲ್ಲಲ್ಪಟ್ಟ ಮುಗ್ಧ ನಾಗರಿಕರು ಎಂದು ಹೇಳಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಖೈಬರ್-ಪಖ್ತುನ್ಖ್ವಾದಲ್ಲಿ ಸುಮಾರು 100 ದಾಳಿಗಳ ಜವಾಬ್ದಾರಿಯನ್ನು ಟಿಟಿಪಿ ಹೊತ್ತುಕೊಂಡಿದೆ. ಅದೇ ಪ್ರಾಂತ್ಯದಲ್ಲಿ ಮನೆಯೊಂದರಲ್ಲಿ ಅಡಗಿಕೊಂಡಿದ್ದ ಸಶಸ್ತ್ರ ತಾಲಿಬಾನ್” ಹೋರಾಟಗಾರರು ತಮ್ಮ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ 7 ಸೈನಿಕರನ್ನು ಗುಂಡು ಹಾರಿಸಿ ಕೊಂದರು ಎಂದು ಪೊಲೀಸ್ ಮೂಲವೊಂದು ಇಂದು ತಿಳಿಸಿದೆ.