ಅಬುಧಾಬಿಯಲ್ಲಿ ಡ್ರೋಣ್‌ ದಾಳಿ: ಇಬ್ಬರು ಭಾರತೀಯರು, ಓರ್ವ ಪಾಕ್‌ ಪ್ರಜೆ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬುಧಾಬಿಯ ಎಮಿರೇಟ್‌ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳ ಹಾಗೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಎಡಿಎನ್‌ಒಸಿಯ ಸಂಗ್ರಹಣಾ ಘಟಕದ ಬಳಿ ಮೂರು ಪೆಟ್ರೋಲಿಯಂ ಟ್ಯಾಂಕರ್‌ಗಳು ಸ್ಫೋಟಗೊಂಡಿದ್ದು, ಈ ಎರಡು ಪ್ರತ್ಯೇಕ ಸ್ಫೋಟ ಪ್ರಕರಣಗಳಲ್ಲಿ ಇಬ್ಬರು ಭಾರತೀಯರು, ಓರ್ವ ಪಾಕ್‌ ಪ್ರಜೆ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನುಈ ಕೃತ್ಯ ಡ್ರೋಣ್‌ ಮೂಲಕ ನಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸದ್ಯ ಪ್ರಾಥಮಿಕ ತನಿಖೆ ನಡೆಸುತ್ತಿದ್ದೇವೆ. ಸಣ್ಣ ಗಾತ್ರದ ವಸ್ತುವೊಂದು ಸ್ಥಳದಲ್ಲಿ ಹಾರಾಟ ನಡೆಸಿರುವುದು ಪತ್ತೆಯಾಗಿದೆ. ಇದು ಡ್ರೋಣ್‌ನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಯೆಮೆನ್‌ನ ಹೌತಿ ಬಂಡುಕೋರರು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!