July 11, 2026
Saturday, July 11, 2026
spot_img

ರಾಜ್ಯದಲ್ಲಿ ಬರ- ಪ್ರವಾಹ | ಜೆಡಿಎಸ್‌ನಿಂದ ನಾಲ್ಕು ಅಧ್ಯಯನ ತಂಡ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ 2026ರ ಮುಂಗಾರು ವೈಫಲ್ಯದಿಂದಾಗಿ ಒಂದೆಡೆ ಭಾರಿ ಮಳೆ-ಪ್ರವಾಹದ ಹಾನಿಯಾದರೆ, ಮತ್ತೊಂದೆಡೆ ಶೇ. 40ರಿಂದ ಶೇ. 43 ಮಳೆ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ. ಅಧ್ಯಯನಕ್ಕಾಗಿ ಜೆಡಿಎಸ್‌ನಿಂದ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.

ಕರ್ನಾಟಕದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜೆಡಿಎಸ್ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು ಒಳಗೊಂಡ ತಂಡಗಳನ್ನು ರಚಿಸಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ, ಹಾವೇರಿ ಮತ್ತು ಬಾಗಲಕೋಟೆ ಮುಂತಾದ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಾರ್ವಜನಿಕ ಆಸ್ತಿ ಮತ್ತು ಬೆಳೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅದೇ ಸಮಯದಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಹೇಳಿದರು. ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್‌ ಬಾಬು ಸಿ.ಬಿ., ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್‌ ಅವರನ್ನೊಳಗೊಂಡಂತೆ ಅಧ್ಯಯನ ತಂಡಗಳು, ಆಯಾ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು / ಮಾಜಿ ಸಚಿವರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚಿಸಿ ತಳಮಟ್ಟದ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಿವೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !