Friday, March 1, 2024

ಬರಗಾಲವೇ ಬಂಡವಾಳ: ಬಡ ಲಂಬಾಣಿ ಕುಟುಂಬಗಳ ಮತಾಂತರಕ್ಕೆ ಯತ್ನ, ಗ್ರಾಮಸ್ಥರ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ:

ಬರಗಾಲವನ್ನೇ ಬಂಡವಾಳ ಮಾಡಿಕೊಂಡ ಕ್ರೈಸ್ತ ಮಿಷನರಿಗಳು ಲಂಬಾಣಿ ಸಮುದಾಯದ ತಾಂಡಾದ ಬಡ ಕುಟುಂಬಗಳನ್ನು ಮತಾಂತರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಲಾಪೂರ್ ತಾಂಡದಲ್ಲಿ ಈ ಘಟನೆ ನಡೆದಿದ್ದು, ಕಳೆದ ಒಂದು ತಿಂಗಳಲ್ಲಿ ನೂರಕ್ಕೂ ಅಧಿಕ ಬಡ ಕುಟುಂಬಗಳನ್ನು ಒತ್ತಾಯಪೂರ್ವಕವಾಗಿ ಮತಾಂತರ ಮಾಡಿದ ಆರೋಪ ಕೇಳಿ ಬಂದಿದೆ‌.

ಈ ಮತಾಂತರಕ್ಕೆ ಗ್ರಾಮದ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯ ಕುಮ್ಮಕ್ಕು ಇದೆ ಎನ್ನಲಾಗಿದ್ದು. ಆಕೆಯ ಕುಟುಂಬಕ್ಕೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ ಎಂದು ಹೇಳಲಾಗಿದೆ. ಅಂಗನವಾಡಿ ಕೇಂದ್ರವನ್ನೇ ಮತಾಂತರಕ್ಕೆ ಬಳಸಿಕೊಳ್ಳಲಾಗಿದೆ ಎನ್ನಲಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕ್ರಿಸ್ಮಸ್ ದಿನದಂದು ಗ್ರಾಮದಲ್ಲಿ ಮತಾಂತರಗೊಂಡ ಕೆಲ ಕುಟುಂಬಗಳಿಂದ ಕ್ರಿಸ್ಮಸ್ ಸಭೆ ನಡೆದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಅಂಗನವಾಡಿ ಕಾರ್ಯಕರ್ತೆ ಈ ಮತಾಂತರಕ್ಕೆ ಕುಮ್ಮಕ್ಕು ನೀಡಿದ್ದಲ್ಲದೇ ಅಂಗನವಾಡಿಯಲ್ಲಿ ಮಕ್ಕಳಿಗೆ ಪ್ರಾರ್ಥನೆ ಬದಲು ಕ್ರೈಸ್ತ ಸಮುದಾಯದ ಪ್ರಾರ್ಥನೆ ಬೋಧನೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಮದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!