ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ರೈತರಿಗೆ ಮಂಜೂರು ಮಾಡಿರುವ ಬರ ಪರಿಹಾರ ಹಣವನ್ನು ಬ್ಯಾಂಕ್‌ಗಳು ಸಾಲ ಖಾತೆಗೆ ಜಮೆ ಮಾಡುತ್ತಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್‌ಗಳು ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬ್ಯಾಂಕ್‌ಗಳ ನಡವಳಿಕೆ ನಿಜಕ್ಕೂ ಕ್ರೂರ ಮತ್ತು ಖಂಡನೀಯ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಅನ್ನದಾತರೇ ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಪರಿಹಾರ ನೀಡಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕುಳಿತಿದೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ.
ಈ ಅಮಾನವೀಯ ಕೃತ್ಯ ತಪ್ಪಲ್ಲ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದು, ಈಗಾಗಲೇ ಭೀಕರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ನೀರು ತರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.