ಹೊಸದಿಗಂತ ಡಿಜಿಟಲ್ ಡೆಸ್ಕ್:
ಬರ ಪರಿಹಾರ ಮನ್ನಾ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಪ್ರತಿ ಅಫಿಡವಿಟ್ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ.
ಕೇಂದ್ರ ಸರ್ಕಾರದ ಮನವಿ ಮೇರೆಗೆ ಈ ಬಾರಿ ನ್ಯಾ. ಬಿಆರ್ ಗವಾಯಿ ನೇತೃತ್ವದ ಪೀಠ ಈ ಸಮಯ ನೀಡಿದೆ.
ಇಂದು ಪ್ರಕರಣದ ವಿಚಾರಣೆ ನಡೆಯಿತು. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಚರ್ಚೆ ನಡೆಸಿದರು. ನ್ಯಾ.ಬಿಆರ್ ಗವಾಯಿ ಕೇಂದ್ರ ಸರ್ಕಾರ ಈಗಾಗಲೇ ಬರ ಪರಿಹಾರ ನೀಡಿರುವುದಾಗಿ ಹೇಳಿದೆ ಎಂದು ಕೇಳಿದರು. ಇದಕ್ಕೆ ಸಿಬಲ್ ಉತ್ತರಿಸಿ, ಹೌದು, ಬರ ಪರಿಹಾರ ನೀಡಲಾಗಿದೆ. ಆದರೆ ಕೆಲವು ಕೈಗಾರಿಕೆಗಳಲ್ಲಿ ಅವರು ಹಣ ನೀಡಲಿಲ್ಲ. ಎನ್‌ಡಿಆರ್‌ಎಫ್ ನಿಯಮಗಳಲ್ಲಿಯೂ ಬದಲಾವಣೆ ಆಗಬೇಕು ಎಂದು ವಾದ ಮಂಡಿಸಿದ್ದಾರೆ.
ಕರ್ನಾಟಕ ಈಗಾಗಲೇ ಅಫಿಡವಿಟ್ ಸಲ್ಲಿಸಿದೆ. ನಮ್ಮಗೆ ಸಮಯ ಬೇಕು ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮನವಿ ಮಾಡಿದರು. ಹಾಗಾಗಿ ನ್ಯಾ.ಬಿ.ಆರ್ ಗವಾಯಿ ಮೂರು ವಾರಗಳ ಸಮಯ ನೀಡಿ, ವಿಚಾರಣೆ ಮುಂದೂಡಿದ್ದಾರೆ.