ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ. 25 ಸಾವಿರ ಕೋಟಿ ರೂಪಾಯಿ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ಇದರಿಂದ ಎಸ್‌ಸಿ ಎಸ್‌ಟಿ ಸಮುದಾಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಸ್ಸಿಎಸ್ಟಿ ಮಕ್ಕಳು ಉನ್ನತ ಶಿಕ್ಷಣ ಪಡೆಯೋದು ಹೇಗೆ? ಗಂಗಾ ಕಲ್ಯಾಣ ಯೋಜನೆ ಹೇಗೆ ಅನುಷ್ಠಾನ ಮಾಡ್ತೀರಿ? ಎಸ್ಸಿಎಸ್ಪಿ ಟಿಎಸ್ಪಿ ಅನುದಾನ ಶಾಸನಬದ್ಧ ಹಕ್ಕು ಇದಕ್ಕಾಗಿ ನಾವು ಹೋರಾಟ ಆರಂಭಿಸಿದ್ದೇವೆ. ಈಗ ಆಗಿರುವ ಅನ್ಯಾಯ ಸರಿಪಡಿಸಬೇಕು. ನಮ್ಮ ಪಾಲು ನಮಗೆ ಸಿಗಬೇಕು ಎಂದು ಆಗ್ರಹಿಸಿ ದ್ದಾರೆ.