ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ದೋಣಿಯೊಂದು ಮುಳುಗಿದ ನಂತರ ನಾಲ್ಕು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಗೋಲ್ಪಾರಾ ಜಿಲ್ಲೆಯ ಸಿಮ್ಲಿಟೋಲಾ ನಾರಾಯಣಪಾರಾ ಪ್ರದೇಶದಲ್ಲಿ ಗ್ರಾಮಸ್ಥರ ಗುಂಪನ್ನು ಸಾಗಿಸುತ್ತಿದ್ದ ದೋಣಿಯೊಂದು ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ. ಗ್ರಾಮಸ್ಥರು ಶವ ಸಂಸ್ಕಾರ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಗೋಲ್ಪಾರಾ ಜಿಲ್ಲೆಯ ಪೊಲೀಸ್ ಅಧೀಕ್ಷಕ ನಬನೀತ್ ಮಹಂತ ವರದಿ ಪ್ರಕಾರ, ಇದುವರೆಗೆ ನಾಲ್ಕು ಶವಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಒಬ್ಬ ವ್ಯಕ್ತಿ ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.