ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ ಹಾಗು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನದ ಅಧ್ಯಕ್ಷ ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ.
ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು,ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದು, ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ