August 31, 2026
Monday, August 31, 2026
spot_img

ಬೆಂಗಳೂರಿನಲ್ಲಿ ಡ್ರಗ್ಸ್‌ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಸಾಗಾಟ ಮಾಡ್ತಿದ್ದ ಇಬ್ಬರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್‌ ದಂಧೆ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್‌ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟಾರೆ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಹಾಗೂ ಅಂತಾರಾಜ್ಯ ಡ್ರಗ್ಸ್‌ ಡೀಲಿಂಗ್‌ನಲ್ಲಿದ್ದ ಉಗಾಂಡ ಮೂಲದ ಮೂವರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ನಗರದ ಹೆಬ್ಬಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹೈಡ್ರೋ ಗಾಂಜಾ ಡೀಲಿಂಗ್‌ನಲ್ಲಿ ನಿರತನಾಗಿದ್ದ ಹಳೆ ಆರೋಪಿ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 2.20 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 180 ಗ್ರಾಂ ತೂಕದ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಇನ್ನು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ2.77 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ. ಪ್ರಯಾಣಿಕನ ಬ್ಯಾಗ್‌ನಲ್ಲಿದ್ದ ಗಾಂಜಾವನ್ನು ಜಪ್ತಿ ಮಾಡಿ ಆತನನ್ನು ವಶಕ್ಕೆ ಪಡೆಯಲಾಗಿದೆ. ಮತ್ತೊಂದು ಪ್ರಮುಖ ಕಾರ್ಯಾಚರಣೆಯಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಚಿಕ್ಕಬಾಣಾವರದಲ್ಲಿ ದಾಳಿ ನಡೆಸಿ 70.50 ಲಕ್ಷ ರೂಪಾಯಿ ಮೌಲ್ಯದ 130 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಜನತ್ ಮತ್ತು ಡ್ರಗ್ಸ್ ರಿಸೀವರ್ ವಾಹಬ್ ಎಲ್ವಿಸ್ ಯುನಿಸ್ ಎಂಬಿಬ್ಬರನ್ನು ಬಂಧಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !