Friday, August 12, 2022

Latest Posts

ಡ್ರಗ್ಸ್​​​​ ಪ್ರಕರಣ: ಬಾಂಬೆ ಹೈಕೋರ್ಟ್ ಅ.26 ರಂದು ಆರ್ಯನ್​ ಖಾನ್ ಜಾಮೀನು ಅರ್ಜಿ ವಿಚಾರಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಡ್ರಗ್ಸ್​​​​ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಬಾಲಿವುಡ್​ ನಟ ಶಾರುಖ್​ ಖಾನ್ ಅವರ​ ಪುತ್ರ ಆರ್ಯನ್​ ಖಾನ್​ರ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26 ರಂದು ಬಾಂಬೆ ಹೈಕೋರ್ಟ್ ನಡೆಸಲಿದೆ.
ಅಕ್ಟೋಬರ್ 2 ರಂದು ಪುತ್ರ ಆರ್ಯನ್ ಖಾನ್ ಸೇರಿದಂತೆ ಒಟ್ಟು 11 ಮಂದಿಯನ್ನು ಮಾದಕ ವಸ್ತು ನಿಯಂತ್ರಣ ದಳ (ಎನ್​ಸಿಬಿ) ಬಂಧಿಸಿತ್ತು. ನಿನ್ನೆಯಷ್ಟೇ ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಮುಂಬೈನ ವಿಶೇಷ ಎನ್​ಡಿಪಿಎಸ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಆರ್ಯನ್ ಖಾನ್ ಪರ ವಕೀಲ ಅಲಿ ಕಾಶೀದ್ ದೇಶಮುಖ್ ಅವರು ಬಾಂಬೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಅ.26ಕ್ಕೆ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಶಾರೂಕ್​ ಮನೆ ಮೇಲೆ ಎನ್​ಸಿಬಿ ದಾಳಿ
ಇತ್ತ ಇಂದು ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್​ನನ್ನು ನೋಡಲು ನಟ ಶಾರೂಕ್ ಖಾನ್​ ಜೈಲಿಗೆ ಆಗಮಿಸಿದ್ದು, ಎಡಿಎ ವೇಳೆ ಶಾರೂಕ್​ ಮನೆ ಮೇಲೆ ಎನ್​ಸಿಬಿ ದಾಳಿ ನಡೆಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss