Wednesday, July 6, 2022

Latest Posts

ಡ್ರಗ್​ ಕೇಸ್: ಮಾಡೆಲ್​ ಸೋನಿಯಾ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಟ್ಟಿದ್ದ ಮಾಡೆಲ್​ ಸೋನಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆ ಆಯಿತು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ನಾಪತ್ತೆ ಆಗಿದ್ದ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು. ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಪ್ರಯತ್ನ ಮಾಡಿದ ಸೋನಿಯಾ ಅವರು ಬಾಯ್​ಫ್ರೆಂಡ್​ ಜೊತೆ ಪರಾರಿ ಆಗಿದ್ದರು.
ದಾಳಿಯ ಸುಳಿವು ಸಿಗುತ್ತಿದ್ದಂತೆಯೇ ಸೋನಿಯಾ ಬೆಂಗಳೂರಿನ ಖಾಸಗಿ ಹೋಟೆಲ್​ಗೆ ತೆರಳಿದ್ದರು.
ಡಿ.ಜೆ. ಹಳ್ಳಿ ಠಾಣೆಯಲ್ಲಿ ಸೋನಿಯಾ ಅವರ ವಿಚಾರಣೆ ನಡೆಸಲಾಯಿತು. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿದರೆ ಇನ್ನಷ್ಟು ಹೆಸರುಗಳು ಹೊರಬರುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss