ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣ: 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೂಪುರ್ ಶರ್ಮಾ ಬೆಂಬಲಿಸುವ ಪೋಸ್ಟ್ ಹಂಚಿಕೊಂಡ ನಂತರ ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ಹತ್ಯೆಗೀಡಾದ ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
2022ರ ಜೂನ್ 21 ರಂದು ಕೊಲ್ಹೆ ಅವರನ್ನು ಕೊಲೆ ಮಾಡಲಾಗಿತ್ತು.
ಈ ಸಂಬಂಧ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ 11 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಿ ಇದೀಗ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ.
ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಜುಲೈ 2 ರಂದು ಎನ್ಐಎ ಪ್ರಕರಣ ದಾಖಲಿಸಿತ್ತು.
ಭಾರತೀಯ ದಂಡ ಸಂಹಿತೆ 120-ಬಿ (ಕ್ರಿಮಿನಲ್ ಪಿತೂರಿ), 302 (ಕೊಲೆ), 153-ಎ (ಧರ್ಮ, ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಜುಲೈ 2 ರಂದು ಎನ್ಐಎ ಪ್ರಕರಣ ದಾಖಲಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!