March 12, 2026
Thursday, March 12, 2026
spot_img

ಕರಾವಳಿಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಹೊಸದಿಗಂತ ವರದಿ, ಮಂಗಳೂರು:

ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ನೆಲೆಯೂರಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಬಿದ್ದಿದೆ. ದ್ವೇಷ ಭಾವನೆಯಿಂದ ನಡೆಯುತ್ತಿದ್ದ ಕೊಲೆಯಂತಹ ಅಹಿತಕರ ಘಟನೆಗಳು ಕಡಿಮೆಯಾಗಿದ್ದು, ಜನತೆ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಕರಾವಳಿಯಲ್ಲಿ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದರು.

ಈ ಹಿಂದೆ ಮಂಗಳೂರಿಗೆ ಬಂದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೆ. ಪೊಲೀಸರು ಕೂಡ ಮುತುವರ್ಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಮಾದಕ ದ್ರವ್ಯ ಜಾಲಕ್ಕೆ ಕಡಿವಾಣ ಬಿದ್ದಿದೆ. ಡ್ರಗ್ಸ್ ಪೆಡ್ಲರ್‌ಗಳ ಸಂಖ್ಯೆಯೂ ಕಡಿಮೆಯಾಗಿದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಕಾರ್ಯ ನಿರಂತರ ಮುಂದುವರಿಯಬೇಕು. ಸ್ಥಳೀಯ ಠಾಣಾ ಪೊಲೀಸರು ೧೫ ದಿನಕ್ಕೊಮ್ಮೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ೪ ತಿಂಗಳಿಗೊಮ್ಮೆ ಶಾಲಾ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಗೃಹಸಚಿವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !