SHOCKING | ಡ್ರಗ್ಸ್‌ ಓವರ್ ಡೋಸ್‌? ಇಬ್ಬರು ಯುವಕರ ಅನುಮಾನಾಸ್ಪದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ಹೊರವಲಯದ ಆನೇಕಲ್‍ನಲ್ಲಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಡ್ರಗ್ಸ್‌ ಓವರ್ ಡೋಸ್‌ನಿಂದ ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ.

ಮೃತರನ್ನು ಸೂರ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಯಾರಂಡಹಳ್ಳಿ ಸಮೀಪ ವಾಸವಿದ್ದ ಅಸ್ಸಾಂ ಮೂಲದ ದಿವಾನ್ ಅಫ್ರೀದಿ ಅಲಿ ಹಾಗೂ ಅಶ್ರಫ್ ಅಲಿ ಎಂದು ಗುರುತಿಸಲಾಗಿದೆ.

ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು. ಇಬ್ಬರು ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಓರ್ವ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!