ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಪ್ರತಿಷ್ಠಿತ ಹೊಟೇಲ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ಹೊಟೇಲ್ ನಲ್ಲಿ ಪಾರ್ಟಿ ಮತ್ತು ಡ್ರಗ್ಸ್ ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸಿಸಿಬಿ ಎಸಿಪಿ ಮಹಾನಂದ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 50ಕ್ಕೂ ಹೆಚ್ಚು ಜನ ಪಾರ್ಟಿ ಮಾಡುತ್ತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಸಿಸಿಬಿ ಪೊಲೀಸರು ತಡರಾತ್ರಿ ಅವಧಿ ಮೀರಿ ಪಾರ್ಟಿ ಮಾಡುತ್ತಿದ್ದಾಗ ದಾಳಿ ಮಾಡಿದ್ದಾರೆ. ಸದ್ಯ ದಾಳಿ ವೇಳೆ ಓರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ. ಪೊಲೀಸರು ಸಂಪೂರ್ಣ ಹೊಟೇಲ್‌ನ್ನು ಪರಿಶೀಲನೆ ನಡೆಸುತ್ತಿದ್ದಾರೆ.