ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರದ ಯರಪ್ಪನಹಳ್ಳಿ ಮನೆಯೊಂದರ ಮೇಲೆ ದಾಳಿ ನಡೆಸಿ ಡ್ರಗ್ಸ್ ದಂಧೆ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ.
ಆಫ್ರಿಕನ್ ಮೂಲದ ಮೈಕೆಲ್ ಓಕಲಿ ಮತ್ತು ಅವರ ಪತ್ನಿ ಸಹನಾ ಅವರನ್ನು ಬಂಧಿಸಲಾಗಿದ್ದು, ಬಂಧಿತರಿಂದ 1 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಜುಲೈನಲ್ಲಿ ಸಿಸಿಬಿ ಪೊಲೀಸರು ಡ್ರಗ್ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಯರಪ್ಪನಹಳ್ಳಿಯಲ್ಲಿ ವಾಸವಾಗಿರುವ ದಂಪತಿಗಳ ಬಗ್ಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 1 ಕೆಜಿಗೂ ಹೆಚ್ಚು ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು ಮತ್ತು ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ.