ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ವಿಚಾರ ಮುನ್ನೆಲೆಗೆ ಬಂದಿದ್ದು, ಹೈದರಾಬಾದ್‌ನ ಮಾದಾಪುರದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆದಿದೆ.
ರೇವ್ ಪಾರ್ಟಿ ವೇಳೆ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ರೇಡ್ ಮಾಡಿದ್ದು, ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಠ್ಠಲ್‌ರಾವ್ ನಗರದ ವೈಷ್ಣವಿ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಕೊಕೇನ್, ಎಲ್‌ಎಸ್‌ಡಿ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈ ಪಾರ್ಟಿಯಲ್ಲಿ ಒಟ್ಟಾರೆ ಐವರು ಸೆಲೆಬ್ರಿಟಿಗಳನ್ನು ಅರೆಸ್ಟ್ ಮಾಡಲಾಗಿದೆ. ಆದರೆ ಅವರ ಹೆಸರುಗಳನ್ನು ರಿವೀಲ್ ಮಾಡಿಲ್ಲ.
ಅಪಾರ್ಟ್‌ಮೆಂಟ್ ಸುತ್ತಮುತ್ತ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ, ಪಾರ್ಟಿಯಲ್ಲಿ ಬರೀ ಸೆಲೆಬ್ರಿಟಿಗಳಷ್ಟೇ ಅಲ್ಲದೆ ಗಣ್ಯರ ಮಕ್ಕಳು ಭಾಗಿಯಾಗಿರುವ ಶಂಕೆ ಇದೆ.