ಹೊಸದಿಗಂತ ವರದಿ, ಮಡಿಕೇರಿ:
ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸೋಮವಾರಪೇಟೆ ನಿವಾಸಿ ಅಶ್ರಫ್, (40) ಹಾಗೂ ಕೊಟ್ಟಮುಡಿ ನಿವಾಸಿ ಇಸ್ಮಾಯಿಲ್(31) ಎಂದು ಗುರುತಿಸಲಾಗಿದ್ದು, ಅವರಿಂದ 19 ಗ್ರಾಂ ನಿಷೇಧಿತ ಮಾದಕ ವಸ್ತು (ಎಂಡಿಎಂಎ)ವನ್ನು ವಶಪಡಿಕೊಳ್ಳಲಾಗಿದೆ.. ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್.ಬಿ.ಜಿ, ಠಾಣಾಧಿಕಾರಿ ರವೀಂದ್ರ ಹಾಗೂ
ಸಿಬ್ಬಂದಿಗಳ ವಿಶೇಷ ತಂಡಕ್ಕೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಯಿತು.
ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಅವರು ಶ್ಲಾಘಿಸಿದ್ದಾರೆ.