ಹೊಸದಿಗಂತ ಆನ್ ಲೈನ್ ಡೆಸ್ಕ್:
ಡ್ರಗ್ಸ್ ಪ್ರಕರಣ ಸಂಬಂಧ ಇಂದು ಎನ್ಸಿಬಿ ಅಧಿಕಾರಿಗಳು ಶಾರುಖ್ ಖಾನ್ ಮನೆ ಮನ್ನತ್ ಹಾಗೂ ನಟಿ ಅನನ್ಯಾ ಪಾಂಡೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅನನ್ಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆಯೇ ತಂದೆ, ಚಂಕಿ ಪಾಂಡೆ ಜತೆ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಬಾಲಿವುಡ್ನಲ್ಲಿ ಚಂಕಿ ಪಾಂಡೆ ಬೇಡಿಕೆಯ ನಟ ಆಗಿದ್ದರು. ನೂರಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗಿದೆ. ಶಾರುಖ್ ಮಗ ಆರ್ಯನ್ಗೂ ಚಂಕಿ ಪಾಂಡೆ ಮಗಳು ಅನನ್ಯಾ ನಡುವೆ ಒಳ್ಳೆಯ ಗೆಳೆತನ ಇತ್ತು. ಇದು ಅವರಿಗೆ ಸಂಕಷ್ಟ ತಂದಿಟ್ಟಿದ್ದೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅಂತೆಯೇ ಅನನ್ಯಾ ಮುಂಬೈನ ಎನ್ಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ.