ಡ್ರಗ್ಸ್​ ಪ್ರಕರಣ: ನಟಿ ರಕುಲ್ ಪ್ರೀತ್ ಸಿಂಗ್, ಟಿಆರ್​ಎಸ್ ಶಾಸಕ ರೋಹಿತ್ ರೆಡ್ಡಿಗೆ ಇಡಿ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡ್ರಗ್ಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಬಿಆರ್‌ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಹಾಗೂ ನಟಿ ರಕುಲ್ ಪ್ರೀತ್ ಸಿಂಗ್​ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಡಿಸೆಂಬರ್ 19ರಂದು ವಿಚಾರಣೆಗೆ ಹೈದರಾಬಾದ್​​ನ ಇಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದೆ.

2021 ರಲ್ಲಿ ಬೆಂಗಳೂರಿನ ಗೋವಿಂದಪುರ ಪೊಲೀಸರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ.
ಉದ್ಯಮಿ ಕಲಹರ್ ರೆಡ್ಡಿ ಜೊತೆಗೆ ಚಲನಚಿತ್ರ ನಿರ್ಮಾಪಕ ಶಂಕರ್ ಗೌಡ ಬೆಂಗಳೂರಿನಲ್ಲಿ ಆಯೋಜಿಸಿದ್ದ ಪಾರ್ಟಿಯಲ್ಲಿ 4 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದರು.

ಅಲ್ಲದೇ ಡ್ರಗ್ಸ್ ಸೇವಿಸಿದ್ದ ಶಂಕರಗೌಡನನ್ನು ಬಂಧಿಸಿದ್ದರು. ಈ ಪಾರ್ಟಿಯಲ್ಲಿ ಬಿಆರ್‌ಎಸ್ ಶಾಸಕ ರೋಹಿತ್ ರೆಡ್ಡಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಇಡಿ ಶಾಸಕ ರೋಹಿತ್ ರೆಡ್ಡಿಗೂ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. ಇವರ ಜೊತೆಗೆ ನಟಿ ರಾಕುಲ್ ಪ್ರೀತ್​ ಸಿಂಗ್​ಗೂ ಇಡಿ ನೋಟಿಸ್​ ಜಾರಿ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!