ಹೊಸದಿಗಂತ ಡಿಜಿಟಲ್ ಡೆಸ್ಕ್:
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್‌ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಜಲಾಲಾಬಾದ್ ಪೊಲೀಸರು ಇಂದು ಬೆಳಗ್ಗೆ ಸುಖ್‌ಪಾಲ್‌ರನ್ನು ಬಂಧಿಸಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಜಲಾಲಾಬಾದ್ ಪೊಲೀಸರು ಗುರುವಾರ ಮುಂಜಾನೆ ಸುಖ್‌ಪಾಲ್ ಮನೆ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.