ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ: ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿ 9 ಮಂದಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಗಳೂರಿನಲ್ಲಿ ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ , ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು,
ಇವರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದು, ಐವರು ಪುರುಷರಲ್ಲಿ ಇಬ್ಬರು ವೈದ್ಯಕೀಯ ಅಧಿಕಾರಿಗಳು ಮತ್ತು ಮೂವರು ಎಂಬಿಬಿಎಸ್ ಮತ್ತು ಬಿಡಿಎಸ್ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!