ಡ್ರಗ್ಸ್ ಪಾರ್ಟಿ | ಸಿದ್ಧಾಂತ್ ಕಪೂರ್ ವಿರುದ್ಧ ಕಾನೂನು ಕ್ರಮ: ಸಚಿವ ಆಗರ ಜ್ಞಾನೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಬೆಂಗಳೂರಿನ ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ನಲ್ಲಿರುವ ಪ್ರಹೋಟೆಲ್ನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಗೃಹಸಚಿವ ಆಗರ ಜ್ಞಾನೇಂದ್ರ, ಸಿದ್ಧಾಂತ್ ಕಪೂರ್ ವಿರುದ್ಧ ಕ್ರಮ ತಗೆದುಕೊಳ್ಳುವುದಕ್ಕಾಗಿ ಈಗಾಗಲೇ ರಕ್ತದ ಮಾದರಿ ಸೇರಿದಂತೆ ಹಲವು ತಪಾಸಣೆಗಳನ್ನು ಮಾಡಲಾಗಿದೆ ಎಂದರು.
ಹಿಂದಿ ಸಿನಿಮಾ ರಂಗದ ನಟನೊಬ್ಬನನ್ನು ಬೆಂಗಳೂರು ಪೊಲೀಸರು ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಬಂಧಿಸಿದ್ದಾರೆ. ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ತಗೆದುಕೊಳ್ಳಲಾಗುತ್ತದೆ. ಕರ್ನಾಟಕ ಸರಕಾರ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರುದ್ಧ ಅಭಿಯಾನದ ರೂಪದಲ್ಲಿ ಕ್ರಮ ವಹಿಸುತ್ತಿದೆ. ಯುವಕರಲ್ಲಿ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದ್ದಾರೆ.
ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾಂತ್ ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!