ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಅಂಕಲೇಶ್ವರದಲ್ಲಿ ದೆಹಲಿ ಮತ್ತು ಗುಜರಾತ್ ಪೊಲೀಸರು ಭಾನುವಾರ ನಡೆಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ 5000 ಕೋಟಿ ರೂಪಾಯಿ ಮೌಲ್ಯದ ಸುಮಾರು 518 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಮೂವರು ಫಾರ್ಮಾ ಕಂಪನಿಗಳ ನಿರ್ದೇಶಕರು ಸೇರಿ ಐವರನ್ನು ಬಂಧಿಸಲಾಗಿದೆ.
ಅವಕಾರ್ ಡ್ರಗ್ಸ್ ಕಂಪನಿಯ ನಿರ್ದೇಶಕರಾದ ಅಶ್ವಿನ್ ರಮಣಿ, ಬ್ರಿಜೇಶ್ ಕೊಥಿಯಾ ಮತ್ತು ವಿಜಯ್ ಭೇಸಾನಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ
ಈ ತಿಂಗಳ ಆರಂಭದಲ್ಲಿ ದೆಹಲಿಯಲ್ಲಿ 700 ಕೆಜಿ ಕೊಕೇನ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಹೊಸ ಬೆಳವಣಿಗೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ 1,289 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಥಾಯ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 13,000 ಕೋಟಿ ರೂ.ಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.
ದುಬೈ ಮತ್ತು ಬ್ರಿಟನ್‌ನಿಂದ ಕಾರ್ಯಾಚರಣೆ ನಡೆಸುತ್ತಿರುವ ಅಂತಾರಾಷ್ಟ್ರೀಯ ಗ್ಯಾಂಗ್‌ಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.