February 27, 2026
Friday, February 27, 2026
spot_img

ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್‌ ಸಾಗಾಟ, ಬೆಂಗಳೂರಿನಲ್ಲಿ 16 ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ನಗರದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 16 ಪೆಡ್ಲರ್​ಗಳನ್ನು ಬಂಧಿಸಿದ್ದಾರೆ.

ಸಿಸಿಬಿ ಹಾಗೂ ನಗರದ ವಿವಿಧ ಠಾಣೆಗಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಗಳು ಸೇರಿದಂತೆ ಹೊರ ರಾಜ್ಯದ 8 ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ನಗರದಲ್ಲಿ 5.24 ಕೋಟಿ ರೂ ಮೌಲ್ಯದ ಡ್ರಗ್ಸ್, ಮೂರು ಸಾವಿರ ಎಂಡಿಎಂ ಮಾತ್ರೆಗಳು ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಇನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ, ಬಂಧಿತಳಿಂದ 2 ಕೋಟಿ ರೂ ಮೌಲ್ಯದ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪರಾರಿಯಾಗಿರುವ ವಿದೇಶಿ ಡ್ರಗ್ ಪೆಡ್ಲರ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಕೋಟಿಗಟ್ಟಲೆ ರೂಪಾಯಿ ಬೆಲೆ ಬಾಳುವ ಮಾದಕ ವಸ್ತುಗಳನ್ನು ಪೊಲೀಸರು ಸೀಝ್‌ ಮಾಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !