Monday, December 29, 2025

ಹೊಸ ವರ್ಷಾಚರಣೆಗೂ ಮುನ್ನ ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು 2.50 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೊದಲ ಪ್ರಕರಣದಲ್ಲಿ, ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಯಂತ್ರಣ ವಿಭಾಗವು ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದೆ.

ಎರಡೂ ಪ್ರಕರಣಗಳಲ್ಲಿ ಬಂಧಿಸಲಾದ ಆರೋಪಿಗಳ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆಯನ್ನು ಬಂಧಿಸಿ 2 ಲಕ್ಷ ಹಣ, 1 ಕೆಜಿ 70 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 60 ಎಕ್ಸ್ ಟೆಸಿ ಪಿಲ್ಸ್ ಗಳು, 100 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 5 ಗ್ರಾಂ ಕೊಕೇನ್‌, 2 ಮೊಬೈಲ್‌, 1 ಲ್ಯಾಪ್‌ಟ್ಯಾಪ್‌ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 2.25 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.

error: Content is protected !!