ಗುಜರಾತ್ ಕರಾವಳಿಯಲ್ಲಿ 200 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಪಾಕ್ ಬೋಟ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿ ಪಡೆ ಮತ್ತು ಗುಜರಾತ್ ನ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಇಂದು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ 200 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಪಾಕಿಸ್ತಾನಿ ಬೋಟ್ ಅನ್ನು ವಶಪಡಿಸಿಕೊಂಡಿದೆ.

ಬೋಟ್ ನಲ್ಲಿ ಅಂದಾಜು 200 ಕೋಟಿ ರೂಪಾಯಿ ಮೌಲ್ಯದ 40 ಕೆಜಿ ಡ್ರಗ್ಸ್ ಪತ್ತೆಯಾಗಿದ್ದು, ಕಾರ್ಯಾಚರಣೆಯಲ್ಲಿ ಕರಾವಳಿ ಪಡೆಯ ಎರಡು ಸ್ಪೀಡ್ ಬೋಟ್ ಗಳನ್ನು ಬಳಸಿದ್ದು, ಗುಜರಾತ್ ನ ಜಾಖು ಕರಾವಳಿ ಪ್ರದೇಶದೊಳಕ್ಕೆ ಬಂದಿದ್ದ ಪಾಕಿಸ್ತಾನದ ಅಲ್ ತಯ್ಯಾಸಾ ಬೋಟ್ ಅನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ಆರು ಜನರು ಹಾಗೂ ಬೋಟ್ ಅನ್ನು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಕರಾವಳಿ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!