ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 118 ಶಾಲಾ ವಾಹನ ಚಾಲಕರ ವಿರುದ್ಧ ಡ್ರಂಕ್ & ಡ್ರೈವ್ ಕೇಸ್ ದಾಖಲಾಗಿದೆ.
ಈ ಎಲ್ಲ ಚಾಲಕರ ವಾಹನ ಚಾಲನೆ ಪರವಾನಗಿ ರದ್ದುಪಡಿಸಲಾಗಿದೆ. ಜನವರಿಯಲ್ಲಿ 16, ಫೆಬ್ರವರಿಯಲ್ಲಿ 7, ಜುಲೈನಲ್ಲಿ 23, ಆಗಸ್ಟ್ನಲ್ಲಿ 26, ಸೆಪ್ಟೆಂಬರ್ನಲ್ಲಿ 22, ನವೆಂಬರ್ನಲ್ಲಿ 24 ಪ್ರಕರಣ ದಾಖಲಾಗಿವೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಕಳೆದ 10 ತಿಂಗಳಲ್ಲಿ 20 ಸಾವಿರಕ್ಕಿಂತ ಹೆಚ್ಚು ಶಾಲಾ ವಾಹನಗಳನ್ನು ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆ ವೇಳೆ ನಿಯಮ ಮೀರಿ ಬಸ್ನಲ್ಲಿ ಹೆಚ್ಚುವರಿ ಶಾಲಾ ಮಕ್ಕಳ ಸಾಗಾಟ ಮಾಡಿದ್ದು ಕೂಡ ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಕಾಂಟ್ರ್ಯಾಕ್ಟ್ ಶಾಲಾ ವಾಹನಗಳ ಚಾಲಕರಿಂದಲೇ ಹೆಚ್ಚು ರೂಲ್ಸ್ ಬ್ರೇಕ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಪೊಲೀರು ಆಯಾ ಶಾಲಾ ಆಡಳಿತ ಮಂಡಳಿಗೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ. ಅಮೂಲ್ಯ ರತ್ನಗಳಿವೆ ಎಂದು ಸ್ಕೂಲ್ ಬಸ್ ಹಿಂಬದಿಯಲ್ಲಿ ಬರೆಸಿ, ಚಾಲಕರೇ ಕುಡಿದು ಗಾಡಿ ಓಡಿಸಿದರೆ ಅಮೂಲ್ಯ ರತ್ನಗಳ ಜೀವಕ್ಕೆ ಕುತ್ತಲ್ಲವೇ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.