March 13, 2026
Friday, March 13, 2026
spot_img

ಕುಡಿದು ಕಾರ್ ಡ್ರೈವ್: ಸರಣಿ ಅಪಘಾತ, ನಟ ಮಯೂರ್ ಪಟೇಲ್ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿ ಮದ್ಯಪಾನ ಮಾಡಿ ಅಜಾಗರೂಕವಾಗಿ ವಾಹನ ಚಲಾಯಿಸಿ ನಡೆದ ಸರಣಿ ಕಾರು ಅಪಘಾತದಲ್ಲಿ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ ಸುಮಾರು 10 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಫಾರ್ಚೂನರ್ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಒಂದರ ಹಿಂದೊಂದು ನಾಲ್ಕು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಎರಡು ಸ್ವಿಫ್ಟ್ ಡಿಜೈರ್ ಕಾರುಗಳು ಹಾಗೂ ಒಂದು ಸರ್ಕಾರಿ ವಾಹನ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.

ಅಪಘಾತದ ವೇಳೆಗೆ ಫಾರ್ಚೂನರ್ ಕಾರನ್ನು ಮಯೂರ್ ಪಟೇಲ್ ತಾನೇ ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಸಂಚಾರ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ಪರೀಕ್ಷೆ ನಡೆಸಿದ್ದು, ಫಲಿತಾಂಶ ಪಾಸಿಟಿವ್ ಆಗಿದೆ. ಕಾರು ಚಾಲಕ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದು, ನಟನ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !