ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ನಿಂತಿದ್ದ ಟ್ರೆಕ್ ಕೆಳಗಡೆ ಮಲಗಿದ್ದ ಪರಿಣಾಮ ಟ್ರಕ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಳ್ಳಕೆರೆ ಗೇಟ್ ಬಳಿಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಟ್ರಕ್ ಕೆಳಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಚಾಲಕ ಗಮನಿಸದೆ ಟ್ರಕ್ ಚಲಾಯಿಸಿದ್ದು, ವ್ಯಕ್ತಿಯ ಮೇಲೆ ಹರಿದುಕೊಂಡು ಹೋಗಿದೆ.
ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.