ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನಿಂದ ಕಿರಿಕಿರಿ: ಗಗನಸಖಿಯರು ಸುಸ್ತೋ ಸುಸ್ತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ-ಬೆಂಗಳೂರು ಇಂಡಿಗೋ ವಿಮಾನದಲ್ಲಿ ಪಾನಮತ್ತನಾದ ಪ್ರಯಾಣಿಕನ ಕಿರಿಕಿರಿಗೆ ಗಗನಸಖಿಯರು ಸುಸ್ತಾಗಿದ್ದಾರೆ. ಮದ್ಯದ ನಶೆಯಲ್ಲಿ ವಿಮಾನದ ತುರ್ತು ಡೋರ್ ತೆರೆಯಲು ಯತ್ನಿಸಿದ ಆರೋಪದ ಮೇಲೆ 40 ವರ್ಷದ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇಂಡಿಗೋ ಅಧಿಕೃತ ಪ್ರಕಟಣೆ ತಿಳಿಸಿದೆ.

ಇಂಡಿಗೋ ಘಟನೆಯ ವಿವರಗಳನ್ನು ನೀಡುತ್ತಾ, “ವಿಮಾನ 6E 308 ರಲ್ಲಿ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಅಮಲೇರಿದ ಸ್ಥಿತಿಯಲ್ಲಿ ತುರ್ತು ನಿರ್ಗಮನದ ಫ್ಲಾಪ್ ಅನ್ನು ತೆರೆಯಲು ಪ್ರಯತ್ನಿಸಿದರು.”

“ಈ ಉಲ್ಲಂಘನೆಯನ್ನು ಗಮನಿಸಿದ ವಿಮಾನದಲ್ಲಿದ್ದ ಸಿಬ್ಬಂದಿ ಕ್ಯಾಪ್ಟನ್‌ಗೆ ಎಚ್ಚರಿಕೆ ನೀಡಿದ್ದು, ಪ್ರಯಾಣಿಕರಿಗೆ ಸೂಕ್ತವಾದ ನಿದರ್ಶನ ನೀಡಲಾಗಿದೆ. ವಿಮಾನದ ಸುರಕ್ಷಿತ ಕಾರ್ಯಾಚರಣೆಯಲ್ಲಿ ಯಾವುದೇ ರಾಜಿ ಇಲ್ಲ” ಎಂದು ಏರ್‌ಲೈನ್ಸ್ ಹೇಳಿದೆ.

ಬೆಂಗಳೂರಿಗೆ ಬಂದ ನಂತರ ಪ್ರಯಾಣಿಕರನ್ನು ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಯಿತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!