ಏರ್ ಇಂಡಿಯಾ ಫ್ಲೈಟ್‌ನಲ್ಲಿ ಗಗನಸಖಿ ಜೊತೆ ಕುಡುಕ ಪ್ರಯಾಣಿಕನಿಂದ ಅಸಭ್ಯ ವರ್ತನೆ: ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈನಿಂದ ಜೈಪುರಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ ಮಹಿಳಾ ಕ್ಯಾಬಿನ್ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ.

ದುಬೈ-ಜೈಪುರ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್‌ನಲ್ಲಿ ಕೊಟ್ಟ ಮದ್ಯ ಕುಡಿದ ಆತ ಬಳಿಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ವರದಿಯಾಗಿದೆ. ಈ ಬಗ್ಗೆ ಏರ್ ಇಂಡಿಯಾ ದೂರು ದಾಖಲಿಸಿದೆ.

ರಾಜಸ್ಥಾನದ ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆದ ಕೂಡಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಈ ಬಗ್ಗೆ ಏರ್‌ಪೋರ್ಟ್ ಪ್ರಾಧಿಕಾರಕ್ಕೆ ವರದಿ ಮಾಡಿದ್ದು, ಕ್ಯಾಬಿನ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಏರ್‌ಲೈನ್ಸ್ ಪ್ರಕರಣ ದಾಖಲಿಸಿದೆ.

ಈ ಬಗ್ಗೆ ಏರ್‌ಲೈನ್ಸ್ ಔಪಾಚಾರಿಕವಾಗಿ ದೂರು ನೀಡಿದೆ. ಈ ವಿಚಾರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸಂಬಂಧಿತ ಮೂಲವೊಂದು ಹೇಳಿದೆ.

ಪ್ರಸ್ತುತ ತನಿಖೆ ನಡೆಯುತ್ತಿರುವುದರಿಂದ ಆರೋಪಿ ಪ್ರಯಾಣಿಕನ ಗುರುತು ಅಥವಾ ಆಪಾದಿತ ದುಷ್ಕೃತ್ಯದ ನಿಖರ ಸ್ವರೂಪದ ಬಗ್ಗೆ ಯಾವುದೇ ಹೆಚ್ಚುವರಿ ಮಾಹಿತಿಯನ್ನು ಬಿಡುಗಡೆ ಮಾಡಲಾಗಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!