Sunday, March 26, 2023

Latest Posts

ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ವಿದ್ಯಾರ್ಥಿಯೊಬ್ಬ ಕುಡಿದ ಅಮಲಿನಲ್ಲಿ ಸಹ ಪುರುಷ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.

ಶುಕ್ರವಾರ ರಾತ್ರಿ 9:16 ಕ್ಕೆ ನ್ಯೂಯಾರ್ಕ್‌ನಿಂದ ಹೊರಟು 14 ಗಂಟೆ 26 ನಿಮಿಷಗಳ ಹಾರಾಟದ ನಂತರ ಶನಿವಾರ ರಾತ್ರಿ 10:12 ಕ್ಕೆ ಇಲ್ಲಿನ ಇಂದಿರಾಗಾಂಧಿ ಇಂಟರ್‌ನ್ಯಾಶನಲ್ (ಐಜಿಐ) ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ವಿಮಾನ ಸಂಖ್ಯೆ ಎಎ292 ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಆರೋಪಿಯು ಅಮೇರಿಕನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈ ಘಟನೆಯ ಬಳಿಕ ವಿದ್ಯಾರ್ಥಿ ಕ್ಷಮೆಯಾಚಿಸಿದ್ದು, ಸಂತ್ರಸ್ತ ಪ್ರಯಾಣಿಕನು ತನ್ನ ವೃತ್ತಿಜೀವನವನ್ನು ಹಾಳುಮಾಡಬಹುದೆಂದು ಅವರ ವಿರುದ್ಧ ದೂರ ದಾಖಲಿಸಿಲ್ಲ ಎನ್ನಲಾಗಿದೆ.

ಎಟಿಸಿ ಸಿಐಎಸ್‌ಎಫ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದು, ಅವರು ಆರೋಪಿ ಪ್ರಯಾಣಿಕನನ್ನು ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!