VIRAL VIDEO| ಮದ್ಯದ ಮತ್ತಿನಲ್ಲಿ ಮಹಿಳೆ ರಂಪಾಟ, ಅರೆಬೆತ್ತಲೆಯಾಗಿ ದುರ್ವರ್ತನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮದ್ಯ ಸೇವಿಸಿದರೆ ಪುರುಷರಷ್ಟೇ ಅಲ್ಲ ಮಹಿಳೆಯರೂ ಮೈಮೇಲೆ ಪ್ರಜ್ಞೆಯಿಲ್ಲದಂತೆ ವರ್ತಿಸುತ್ತಿದ್ದಾರೆ. ಇದೀಗ ಮಹಿಳೆಯೊಬ್ಬರು ಕುಡಿದ ಅಮಲಿನಲ್ಲಿ ನಡು ರಸ್ತೆಯಲ್ಲಿ ಎರಬೆತ್ತಲೆಯಾಗಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋವೊಂದು ವೈರಲ್‌ ಆಗಿದೆ. ಮಹಾರಾಷ್ಟ್ರದ ಥಾಣೆಯ ಮೀರಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ನೇಹಿತರೆಲ್ಲಾ ಸೇರಿ ರಾತ್ರಿ ಕೆಲವರು ಪಾರ್ಟಿ ಮಾಡಿದ್ದಾರೆ ಮಿತಿ ಮೀರಿ ಮದ್ಯ ಸೇವನೆಯಿಂದ ಅವರಲ್ಲಿ ಓರ್ವ ಮಹಿಳೆಗೆ ಕಿಕ್‌ ಹೆಚ್ಚಾಗಿ ರಸ್ತೆಯಲ್ಲಿ ರಂಪಾಟ ಮಾಡಿದ್ದಾಳೆ.

ಎಲ್ಲರೂ ನೋಡುತ್ತಿದ್ದಂತೆಯೇ ಪ್ಯಾಂಟ್‌ ಕಳಚಿ ಕಂಡ ಕಂಡವರ ಮೇಲೆ ಬಾಯಿಗೆ ಬಂದ ಹಾಗೆ ಮಾತಾಡಿದ್ದಲ್ಲದೆ, ದಾಳಿಗೆ ಯತ್ನಿಸಿದ್ದಾಳೆ. ಆಕೆಯನ್ನು ಸುಧಾರಿಸುವಲ್ಲಿ ಸ್ನೇಹಿತರಿಗೆ ಸುಸ್ತೋ ಸುಸ್ತು. ಕುಡಿದ ಮತ್ತಿನಲ್ಲಿ ಮಹಿಳೆಯ ಕೃತ್ಯವನ್ನು ಯಾರೋ ವಿಡಿಯೋ ಮಾಡಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಈ ವಿಷಯ ಪೊಲೀಸರಿಗೆ ಗೊತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವಿದೆ. ಪೊಲೀಸರು ಸ್ಪಂದಿಸಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!