Tuesday, July 5, 2022

Latest Posts

ಕುಡಿದ ಮತ್ತಿನಲ್ಲಿ ತಮ್ಮನನ್ನೇ ಕೊಂದ ಅಣ್ಣ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಡ್ಯ :

ಅಣ್ಣನೇ ತಮ್ಮನನ್ನು ಕೊಲೆಗೈದಿರುವ ಘಟನೆ ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಂಕರ್ ಎಂಬುವರ ಪುತ್ರ ಚಂದನ್ (22) ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದುಘಿ, ಈತನನ್ನು ಸಹೋದರ ಅಭಿಷೇಕ್ (24) ಕೊಲೆ ಮಾಡಿದವನಾಗಿದ್ದಾನೆ.
ಅಭಿಷೇಕ್ ಗ್ರಾಮದಲ್ಲೇ ವ್ಯವಸಾಯ ಮಾಡಿಕೊಂಡಿದ್ದ. ಬೇರೆ ಊರಿನಲ್ಲಿದ್ದ ಚಂದನ್ ಕೋವಿಡ್ ಲಾಕ್‌ಡೌನ್‌ನಿಂದಾಗಿ ಗ್ರಾಮಕ್ಕೆ ಬಂದಿದ್ದ. ಮದ್ಯವ್ಯಸನಿಗಳಾಗಿದ್ದ ಇಬ್ಬರೂ ನಿತ್ಯವೂ ಗಲಾಟೆ ಮಾಡಿಕೊಳ್ಳುತ್ತಿದ್ದರು. ನಿನ್ನೆ ರಾತ್ರಿಯೂ ಸಹೋದರರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಅಭಿಷೇಕ್ ನಿನ್ನನ್ನು ಮುಗಿಸಿಬಿಡುತ್ತೇನೆ ಎಂದು ಚಂದನ್‌ನ್ನು ಕೆಳಕ್ಕೆ ಕೆಡವಿ ಕಲ್ಲಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ.
ತೀವ್ರವಾಗಿ ಗಾಯಗೊಂಡ ಚಂದನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಸಿಪಿಐ ಆನಂದ್‌ ಗೌಡ ಸೇರಿದಂತೆ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕೆರಗೋಡು ಪಿಎಸ್‌ಐ ಚಂದ್ರಹಾಸ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss