ಕಂಠ ಪೂರ್ತಿ ಕುಡಿದು ಮೆಟ್ರೋ ನಿಲ್ದಾಣದಲ್ಲಿ ಗಲಾಟೆ: ಓರ್ವ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಂಠ ಪೂರ್ತಿ ಕುಡಿದು ಬೆಂಗಳೂರಿನ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗಲಾಟೆ ಮಾಡಿದ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಾಲ್ವರು ಭಾನುವಾರ ಕುಡಿದ ಅಮಲಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಭದ್ರತಾ ಅಧಿಕಾರಿಗಳು ಅವರನ್ನು ತಡೆದಿದ್ದಾರೆ. ಈ ವೇಳೆ ಸಿಬ್ಬಂದಿ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.

ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!