ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ವಾಹನ ಚಾಲಕರ ವಿರುದ್ಧ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಕುಡಿದು ಚಾಲನೆ ಮಾಡ್ತಿದ್ದವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ.
ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು ಎನ್ನುವ ಆರೋಪ ಎದುರಾಗಿದ್ದು, ಪೊಲೀಸ್ ಅಧಿಕಾರಿಗಳು ಫೀಲ್ಡ್‌ಗಿಳಿದು ತಪಾಸಣೆ ನಡೆಸಿದ್ದಾರೆ.
ಒಟ್ಟಾರೆ 3,414ಶಾಲಾ ವಾಹನಗಳ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 16 ಮಂದಿ ಚಾಲಕರು ಕುಡಿದು ಗಾಡಿ ಓಡಿಸಿದ್ದಾರೆ. ಅವರ ವಿರುದ್ಧ ಕೇಸ್ ದಾಖಲಾಗಿದೆ.