ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಮಾವನನ್ನೆ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಮೈಲಾರಪ್ಪ ಕೊಲೆಯಾದ ವ್ಯಕ್ತಿ. ಕುಡಿದ ಮತ್ತಿನಲ್ಲಿದ್ದ ಅಳಿಯ ರಮೇಶ್ ಮಾವನೊಂದಿಗೆ ಜಗಳಕ್ಕಿಳಿದಿದ್ದಾನೆ. ಈ ವೇಳೆ ಕೋಪದಲ್ಲಿ ಮಾವನನ್ನು ಗೊಡೆ ಕಡೆಗೆ ತಳ್ಳಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಮೈಲಾರಪ್ಪ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ಕೆಲವು ದಿನಗಳಿಂದ ಮಾವ-ಅಳಿಯ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು. ಅದು ಇಂದು ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ರಮೇಶ್ ನನ್ನು ಬಂಧಿಸಲಾಗಿದೆ ಎಂದು ಆಡೂರು ಪೋಲಿಸರು ತಿಳಿಸಿದ್ದಾರೆ.
ಆಡೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಾವೇರಿ ಜಿಲ್ಲಾ ಪೊಲಿಸ್ ವರಿಷ್ಠಧಿಕಾರಿ ಡಾ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.