WEATHER | ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಕಡೆ ಮಾತ್ರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಕೆಲವೇ ಕೆಲವು ಕಡೆಗಳಲ್ಲಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಬಂದಿದ್ದರೂ, ಮುಂಗಾರು ಆರಂಭವಾಗುತ್ತಿದ್ದಂತೆ ಮಳೆ ಕ್ಷೀಣಿಸಿದೆ. ಮೇ ಅಂತ್ಯದಲ್ಲಿ ಎಲ್ಲೆಡೆ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿತ್ತು. ಇದೀಗ ಜೂನ್ 10ರ ಬಳಿಕ ಮಳೆ ಚುರುಕುಗೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕದ್ರಾ, ಕ್ಯಾಸಲ್​ರಾಕ್, ಮಂಕಿ, ಆಗುಂಬೆ, ಯಲ್ಲಾಪುರ, ಅಫ್ಝಲ್​ಪುರ, ಶಿಗ್ಗಾಂವ್, ಕಲಘಟಗಿ, ಲೋಂಡಾ, ಚಿಕ್ಕೋಡಿ, ಹೊನ್ನಾವರ, ಕುಮಟಾ, ಜೋಯಿಡಾ, ಗೇರುಸೊಪ್ಪ, ಮಂಗಳೂರು, ಪಣಂಬೂರು, ಮುಂಡಗೋಡು, ಮುಲ್ಕಿ, ಕಾರವಾರ, ಕುಂದಾಪುರ, ಅಂಕೋಲಾದಲ್ಲಿ ಮಳೆಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!