March 26, 2026
Thursday, March 26, 2026
spot_img

WEATHER | ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಮಾತ್ರ ಬಿಸಿಲು ಜಾಸ್ತಿಯಂತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ರಾಜ್ಯದಲ್ಲಿ ಒಣಹವೆ ಹಾಗೂ ಶುಷ್ಕ ವಾತಾವರಣವಿರಲಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಆಕಾಶ ಕ್ಲಿಯರ್‌ ಆಗಿದ್ದು, ಬಿಸಿಲು ಜಾಸ್ತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಒಣಹವೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !